Wednesday, February 21, 2024

ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ....

ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ.ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ವಿ.ಲವ ನಿರ್ದೇಶನದ ಹಾಗೂ ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.  ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tuesday, February 20, 2024

’ಸಿಸಿಎಲ್’ಗೆ ದಿನಗಣನೆ..ಬಿಗ್ ಅಪ್ ಡೇಟ್ ಕೊಟ್ಟ ಕರ್ನಾಟಕ ಬುಲ್ಡೋಜರ್ಸ್ ತಂಡ...

’ಸಿಸಿಎಲ್’ಗೆ ದಿನಗಣನೆ..ಬಿಗ್ ಅಪ್ ಡೇಟ್ ಕೊಟ್ಟ ಕರ್ನಾಟಕ ಬುಲ್ಡೋಜರ್ಸ್ ತಂಡ.ಸೆಲೆಬ್ರಿಡಿ ಕ್ರಿಕೆಟ್ ಲೀಗ್: ಕ್ರಿಕೆಟ್ ಅಭ್ಯಾಸಕ್ಕಿಳಿದ ಕರ್ನಾಟಕ ಬುಲ್ಡೋಜರ್ಸ್ ತಂಡ.. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆಯಷ್ಟೇ ಬಾಕಿ ಉಳಿದಿದೆ. ಇದೇ ತಿಂಗಳ 23ರಿಂದ ತಾರೆಯರು ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯುತ್ತಿದ್ದಾರೆ. ಸ್ಯಾಂಡಲ್ ವುಡ್ ಟು ಬಾಲಿವುಡ್ ತನಕ ಎಲ್ಲಾ ಇಂಡಸ್ಟ್ರೀಯ ಸ್ಟಾರ್ ಗಳು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 10 ಸೀಸನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆಷ್ಟೇ ದುಬೈನಲ್ಲಿ ಅದ್ಧೂರಿಯಾಗಿ ಸಿಸಿಎಲ್ ಗೆ ಚಾಲನೆ ಕೊಡಲಾಗಿತ್ತು. ಇದೀಗ ತಂಡಗಳು ಕ್ರಿಕೆಟ್ ಅಭ್ಯಾಸಕ್ಕಿಳಿದಿದ್ದಾರೆ. ಅದರಂತೆ ಕರ್ನಾಟಕ ಬುಲ್ಡೋಜರ್ಸ್ ತಂಡ ಅಭ್ಯಾಸಕ್ಕೂ ಮುನ್ನ ಮಾಧ್ಯಮದರೊಟ್ಟಿಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದೆ. ಇತ್ತೀಚೆಗಷ್ಟೇ ಖಾಸಗಿ ಹೋಟೆಲ್ ನಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಮಾಲೀಕ ಅಶೋಕ್ ಖೇಣಿ, ಸಿಸಿಎಲ್ ಸಂಸ್ಥಾಪಕ ವಿಷ್ಣು ಇಂದೋರಿ ಹಾಗೂ ಕ್ಯಾಪ್ಟನ್ ಪ್ರದೀಪ್ ಸೇರಿದಂತೆ ಇತತರು ಭಾಗಿಯಾಗಿದ್ದರು. ಅನಾರೋಗ್ಯದ ಕಾರಣದಿಂದ ಕಿಚ್ಚ ಸುದೀಪ್ ಅವರು ಭಾಗಿಯಾಗಲಿರಲಿಲ್ಲ. ಇದೇ ಸಂದರ್ಭದಲ್ಲಿ ಸಿಸಿಎಲ್ ಜರ್ನಿ ವಿಡಿಯೋ ಬಿಡುಗಡೆ ಮಾಡಲಾಯಿತು. ಬಳಿಕ ಮಾತನಾಡಿದ ಕರ್ನಾಟಕ ಬುಲ್ಡೋಜರ್ಸ್ ಕ್ಯಾಪ್ಟನ್ ಪ್ರದೀಪ್, 12 ವರ್ಷದ ಸಿಸಿಎಲ್ ಜರ್ನಿ ನೋಡಿದ್ಮೇಲೆ. ತುಂಬಾ ಎಮೋಷನಲ್ ಮೂವೆಂಟ್ ತರ ಇದೆ. ವರ್ಷಕ್ಕೆ 2 ತಿಂಗಳು ಇಟ್ಟುಕೊಂಡರೇ 24 ತಿಂಗಳಾಯ್ತು. ಅಂದ್ರೆ 2 ವರ್ಷದ ಜೀವನವನ್ನು ಸಿಸಿಎಲ್ ಗೆ ಕೊಟ್ಟಿದ್ದೇವೆ. ಅಷ್ಟು ವರ್ಷದ ಎಫರ್ಟ್ ಇವತ್ತು ಬುರ್ಜ್ ಖಾಲೀಫಾ ಮೇಲೆ ಬರ್ತಿದೆ. ಸಿಸಿಎಲ್ ಬಿಗ್ಗರ್ ಅಂಡ್ ಬೆಟ್ಟರ್ ಆಗ್ತಿದೆ. ಇವಿಷ್ಟಕ್ಕೂ ನಾನು ವಿಷ್ಣು ಸರ್ ಗೆ ಧನ್ಯವಾದ ಹೇಳುತ್ತೇನೆ. ಕರ್ನಾಟಕ ಬುಲ್ಡೋಸರ್ಸ್ ಸ್ಟಾಟ್ ಆಗುವುದೇ ಕೆ ಅಕ್ಷರದಿಂದ ಅಂದ್ರೆ ಸುದೀಪಣ್ಣ ಅವರನ್ನು ಬಿಟ್ಟು ಮಾತನಾಡಲು ಸಾಧ್ಯವಿಲ್ಲ. ಅವರಿಗೆ ಹುಷಾರಿಲ್ಲ. ಹೀಗಾಗಿ ಅವರು ಬರಲು ಆಗಲಿಲ್ಲ ಎಂದರು.ಕರ್ನಾಟಕ ಬೋಲ್ಡರ್ ತಂಡದ ಮಾಲೀಕ ಅಶೋಕ್ ಖೇಣಿ ಮಾತನಾಡಿ, 10 ವರ್ಷದ ಹಿಂದೆ ಕನ್ನಡ ಸಿನಿಮಾ ಇಂಡಸ್ಟ್ರೀ ಚಿಕ್ಕ ಇಂಡಸ್ಟ್ರೀಯಾಗಿತ್ತು. ಇಂಡಸ್ಟ್ರೀಯ ಒಟ್ಟಾರೆ ಗಳಿಗೆ 50 ಕೋಟಿಯಾಗಿತ್ತು. ಇದು 10 ವರ್ಷದ ಹಿಂದಿನ ಕಥೆ. ಕೆಜಿಎಫ್ ಬಂದ್ಮೇಲೆ ಇಂಡಸ್ಟ್ರೀ ತುಂಬ ಬದಲಾಗಿದೆ. ದರ್ಶನ್ ಇಂಡಸ್ಟ್ರೀಗೆ ಬಂದು 25 ವರ್ಷವಾಯ್ತು. ಅವರಿಗೆ 47 ವಯಸ್ಸು. ಇಂದಿಗೂ. ಹೀರೋ ಆಗಿಯೂ ನಟಿಸ್ತಿದ್ದಾರೆ. ವರ್ಷಕ್ಕೆ 2 ಸಿನಿಮಾ ಮಾಡ್ತಿದ್ದಾರೆ. ನನ್ನ ಅದೃಷ್ಟ ಸಿಸಿಎಲ್ ನಲ್ಲಿ ಇಂತಹ ತಂಡ ಪಡೆದಿರುವುದು. ಸುದೀಪ್ ಅವರಿಗೆ ಕ್ರಿಕೆಟ್ ಅಂದ್ರೆ ಹುಚ್ಚು. ಕ್ರಿಕೆಟ್ ನ್ನು ಪ್ರೀತಿಸ್ತಾರೆ. ಒಮ್ಮೆ ಸಿಸಿಎಲ್ ನಲ್ಲಿ ಪೆಟ್ಟು ಮಾಡಿಕೊಂಡಿದ್ದರು. ಆದ್ರೆ ಅದನ್ನು ಲೆಕ್ಕಿಸದೇ ಮತ್ತೆ ಆಟವಾಡಿದ್ದರು. ಕ್ರಿಕೆಟ್ ಸಿನಿಮಾ ಇಂಡಸ್ಟ್ರೀಯ ಭಾಗ. ಅದೇ ರೀತಿ ಸಿನಿಮಾ ಕ್ರಿಕೆಟ್ ನ ಒಂದು ಭಾಗ ಎಂದರು. ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ನ ಆಳ ಏನೆಂಬುವುದು ಮೊದಲೇ ಗೊತ್ತಿದ್ದರೆ ಖಂಡಿತ ಇದಕ್ಕೆ ಕೈ ಹಾಕುತ್ತಿರಲಿಲ್ಲ. ಇದನ್ನು ಈ ಮಟ್ಟಕ್ಕೆ ತರಬೇಕಾದರೆ ಬಹಳ ಕಷ್ಟಪಟ್ಟಿದ್ದೇವೆ. ನೋವು ಅನುಭವಿಸಿದ್ದೇವೆ. ಅನೇಕ ಬಾರಿ ನಿಲ್ಲಿಸುವ ಯೋಚನೆ ಯೂ ಬಂದಿದೆ. ಆದರೆ ಅಶೋಕ್ ಸರ್, ಸುದೀಪ್ ಸರ್ ಸಪೋರ್ಟ್ ಹಾಗೂ ಆಟದ ಮೇಲಿ ಪ್ರೀತಿ ಇದನ್ನು ಇಲ್ಲಿವರೆಗೆ ತರಲು ಸಾಧ್ಯವಾಯಿತು. ಈ ಬಾರಿ ಸಿಸಿಎಲ್ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು,ಕ್ರಿಕೆಟ್ ಪ್ರೇಮಿಗಳು ಮತ್ತು ಸಿನಿಮಾ ಪ್ರೇಮಿಗಳು ಮೈದಾನದಲ್ಲಿ ಮಾತ್ರವಲ್ಲ ದೂರದರ್ಶ, ಸೋನಿ, ಜಿಯೋ ಸಿನಿಮಾ ಪ್ರಸಾರಗೊಳ್ಳುತ್ತಿರುವುದು ಹೊಸ ದಾಖಲೆ ಬರೆದಿದೆ ಎಂದರು. 
ಸಿಸಿಎಲ್ 10ನೇ ಸೀಸನ್ ಫೆಬ್ರವರಿ 23 ರಿಂದ ಶುರುವಾಗಿ ಮಾರ್ಚ್ 17 ರವರೆಗೆ ನಡೆಯಲ್ಲಿದೆ..ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪರ್ಸ್ಟಾರ್ಗಳನ್ನು ಒಳಗೊಂಡಿರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಯುಎಇಯ ಶಾರ್ಜಾದಲ್ಲಿ ಲೀಗ್ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ. ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕರ್ನಾಟಕ ಬುಲ್ಡೋಜರ್ಸ್ ಮೊದಲ ಪಂದ್ಯಾವಳಿ ಇದೇ 25ರಂದು ನಡೆಯುತ್ತಿದ್ದು, ಮುಂಬೈ ಹೀರೋಸ್ ಎದುರು ಸೆಣಸಾಡಲಿದೆ. 
ತಂಡಗಳು ಯಾವುವು?
• ಮುಂಬೈ ಹೀರೋಸ್
• ಕೇರಳ ಸ್ಟ್ರೈಕರ್ಸ್
• ತೆಲುಗು ವಾರಿಯರ್ಸ್
• ಭೋಜ್ಪುರಿ ದಬಾಂಗ್ಸ್
• ಕರ್ನಾಟಕ ಬುಲ್ಡೋಜರ್ಸ್
• ಬೆಂಗಾಲ್ ಟೈಗರ್ಸ್
• ಚೆನ್ನೈ ರೈನೋಸ್
• ಪಂಜಾಬ್ ದಿ ಶೇರ್
‘ಮುಂಬೈ ಹೀರೋಸ್’ ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್’ ಟೀಮ್ಗೆ ವೆಂಕಟೇಶ್ ಅವರು ಬ್ರ್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ಟೀಮ್ ಗೆ ಪ್ರದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್ ಲಾಲ್ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್’ ತಂಡಕ್ಕೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು ‘ಪಂಜಾಬ್ ದೆ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್’ ಟೀಮ್ ಗೆ ಜಿಸ್ಸು ಸೇನ್ಗುಪ್ತ ಕ್ಯಾಪ್ಟನ್ ಆಗಿದ್ದಾರೆ.

Friday, June 16, 2023

ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ "ಆಟ ಸಾಮಾನು"

ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ "ಆಟ ಸಾಮಾನು"
ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸುತ್ತಿರುವ ಚಿತ್ರ
"ಆಟ ಸಾಮಾನು". ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. " ಆಟ ಸಾಮಾನು" ನನ್ನ ಮೂರನೇ ಚಿತ್ರ. ಈ ಚಿತ್ರವನ್ನು "ಬಂಧು ಮಿತ್ರರ" ಜೊತೆ ಸೇರಿ ನಿರ್ಮಿಸುತ್ತಿದ್ದೇನೆ ಹಾಗೂ ನಿರ್ದೇಶನ ಕೂಡ ಮಾಡುತ್ತಿದ್ದೇನೆ. "ಆಟ ಸಾಮಾನು" ಕ್ರೀಡಾ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರ. ನಮ್ಮ ಮನೆ ಬಳಿ ಹೊಸ ಕಟ್ಟಡ ಕಟ್ಟುತ್ತಿದ್ದಾರೆ. ಅಲ್ಲಿ ಕೆಲಸ ಮಾಡುವ ಮಕ್ಕಳು ಮರಳು, ಇಟ್ಟಿಗೆ ಹಾಗೂ ಸೀಮೆಂಟ್ ಜೊತೆ ಆಡುತ್ತಾರೆ. ಎದುರಿಗೆ ಶ್ರೀಮಂತರ ಮನೆ ಇದೆ. ಅಲ್ಲಿ ಮಕ್ಕಳು ಆಟವಾಡಲು ಸಕಲ ಆಟಿಕೆಗಳು ಇದೆ. ಅವರು ಆಡುತ್ತಿರುವುದನ್ನು ನೋಡಿದ ಕಾರ್ಮಿಕರ ಮಗು ಕಣ್ಣೀರು ಸುರಿಸುತ್ತಾ ನಿಂತಿರುತ್ತದೆ. ಆ ಮಗುವನ್ನು ನೋಡಿದ ನನ್ನ ಮಡದಿ ಆ ಮಗುವಿಗೆ ಕೆಲವು "ಆಟ ಸಾಮಾನು" ತಂದು ಕೊಡುತ್ತಾರೆ. ಚಿತ್ರಕ್ಕೆ ಈ ಶೀರ್ಷಿಕೆಯಿಡಲು ನನ್ನ‌ ಮಡದಿಯೇ ಸ್ಪೂರ್ತಿ ಎನ್ನಬಹುದು. ‌ಇದನ್ನು ಟೀಸರ್ ನಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ.‌ ಮುಂದೆ ಚಿತ್ರದಲ್ಲಿ ಅದೇ‌ ಹುಡುಗಿ ಕ್ರೀಡಾಲೋಕದಲ್ಲಿ ದೊಡ್ಡ ಸಾಧನೆ ಮಾಡುತ್ತಾಳೆ. ಇದು ಕಥೆಯ ಎಳೆ. ಜುಲೈನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರಿನಲ್ಲೇ ಚಿತ್ರೀಕರಣವಾಗಲಿದೆ. ಕಲಾವಿದರ ಆಯ್ಕೆ ನಡೆಯುತ್ತಿದೆ ಎಂದು ಮಧು ಕಲ್ಯಾಣ್ ಚಿತ್ರದ ಕುರಿತು ವಿವರಣೆ ನೀಡಿದರು.
ಬಿಲ್ಡಪ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸ್ಟಿಲ್ ವೆಂಕಟೇಶ್ ಛಾಯಾಗ್ರಹಣ, ಪ್ರದ್ಯೋತನ್ ಸಂಗೀತ ನಿರ್ದೇಶನ ಹಾಗೂ ಉಮೇಶ್ ಆರ್ ಬಿ ಅವರ ಸಂಕಲನವಿದೆ.

Thursday, June 15, 2023

ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ರೆಡಿ...ಕರ್ನಾಟಕದಲ್ಲಿಯೂ ರಿಲೀಸ್ ಆಗಲಿದೆ LGM-ಲೆಟ್ಸ್ ಗೆಟ್ ಮ್ಯಾರೀಡ್

ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ರೆಡಿ...ಕರ್ನಾಟಕದಲ್ಲಿಯೂ ರಿಲೀಸ್ ಆಗಲಿದೆ LGM-ಲೆಟ್ಸ್ ಗೆಟ್ ಮ್ಯಾರೀಡ್
ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ಪತ್ನಿ‌ ಸಾಕ್ಷಿ ಜೊತೆಗೂಡಿ ತಮ್ಮದೇ ಧೋನಿ ಎಂಟರ್ ಟೇನ್ಮೆಂಟ್ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ ಲೆಟ್ಸ್ ಗೆಟ್ ಮ್ಯಾರೀಡ್.
ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಈ ಚಿತ್ರವನ್ನು ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ. 
ಫ್ಯಾಮಿಲಿ ಎಂಟರ್​ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ರಮೇಶ್ ತಮಿಳ್​ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ರಮೇಶ್ ತಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೇಲರ್‌ನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.

ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ

ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ
"ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.
 ಪ್ರಸ್ತುತ ನವೀನ್ ಶಂಕರ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. "ಕ್ಷೇತ್ರಪತಿ" ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌.
ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. 
ಈ ಹಿಂದೆ "ಹೊಂದಿಸಿ ಬರೆಯಿರಿ" ಚಿತ್ರದಲ್ಲಿ ನಾಯಕ - ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ, ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ....

ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ. ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶ...